\v 19 ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮದ ಬಲವು ಹಾಗೂ ಆತನ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. \v 20 ಪರಾಕ್ರಮ ಶಕ್ತಿಯಿಂದಲೇ ದೇವರು ಯೇಸು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವಗಳ ಮೇಲೆಯೂ, ಹಾಗೂ \v 21 ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಕೀರ್ತಿ ಗಳಿಸಿದ ಎಲ್ಲಾ ನಾಮಗಳ ಮೇಲೆಯೂ ಯೇಸುಕ್ರಿಸ್ತನೇ ಆಡಳಿತ ನಡೆಸುವಂತೆ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕೂರಿಸಿಕೊಂಡನು.