\v 17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು \v 18 ಅವರಿಗೆ – ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ \v 19 ಆತನು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು. ಇಬ್ಬರು ಶಿಷ್ಯರು ತಮಗೆ ಹೆಚ್ಚಿನ ಪದವಿಯನ್ನು ಕೊಡಬೇಕೆಂದು ಬೇಡಿಕೊಳ್ಳಲು ಯೇಸು ದೀನಭಾವವನ್ನು ಕುರಿತು ಬೋಧಿಸಿದ್ದು